Kannada NewsKarnataka NewsPolitics

*ಡಿಕೆ ಶಿವಕುಮಾ‌ರ್ ಅವರನ್ನು ಭೇಟಿ ಮಾಡಿದ ಕೆ ಎನ್ ರಾಜಣ್ಣ*

ಪ್ರಗತಿವಾಹಿನಿ ಸುದ್ದಿ :  ಮಾಜಿ ಸಚಿವ ಕೆಎನ್ ರಾಜಣ್ಣ ಅವರು ಬೆಂಗಳೂರಿನ ಖಾಸಗಿ ಅತಿಥಿ ಗೃಹದಲ್ಲಿ ಶನಿವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾ‌ರ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ರಾಜಣ್ಣ ಡಿಕೆಶಿ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. 

ನವೆಂಬರ್ ಕ್ರಾಂತಿಯ ಬಗ್ಗೆ ಮೊದಲು ಬಾಂಬ್ ಸಿಡಿಸಿದ್ದ ರಾಜಣ್ಣ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಶಿವಕುಮಾ‌ರ್ ಮುಖ್ಯಮಂತ್ರಿಯಾಗುವ ಪರಿಸ್ಥಿತಿ ಉದ್ಭವವಾಗುವುದಿಲ್ಲ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದರು.

ಡಿಸಿಎಂ ಡಿಕೆಶಿ ಹಾಗೂ ರಾಜಣ್ಣನ ನಡುವೆ ಯಾವುದು ಸರಿಯಿಲ್ಲ. ಇಬ್ಬರ ನಡುವೆ ಬಾಂಧವ್ಯ ಹಳಸಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬಂದಿದೆ. ಈ ನಡುವೆ ಇಬ್ಬರು ಭೇಟಿಯಾಗಿ ಮಾತುಕತೆ ನಡೆಸಿರೋದು ಕುತೂಹಲ ಮೂಡಿಸಿದೆ.

Home add -Advt

ರಾಜಕೀಯ ಪಂಡಿತರ ಪ್ರಕಾರ ಸಂಕ್ರಾಂತಿ ವೇಳೆಗೆ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಗುಸುಗುಸು ಆರಂಭವಾಗಿದ್ದು, ಡಿಸಿಎಂ ಡಿಕೆಶಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡ್ತಿದ್ದಾರೆ. 

ಸಧ್ಯ ರಾಜಣ್ಣರನ್ನು ಭೇಟಿಯಾಗಿರೋ ಡಿಕೆಶಿ ಭವಿಷ್ಯದ ರಾಜಕೀಯವನ್ನು ಸಮಗ್ರವಾಗಿ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.

Related Articles

Back to top button