*BIG BREAKING: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಕಾರು ಚಾಲಕನಿಗೆ ಚಾಕು ಇರಿತ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳಕರ್ ಅವರ ಕಾರು ಚಾಲಕನಿಗೆ ಚಾಕು ಇರಿದಿರುವ ಘಟನೆ ನಡೆದಿದೆ.
ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃಣಾಲ್ ಹೆಬ್ಬಾಳಕರ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ್ (32) ಎಂಬುವವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಬಸವಂತ್ ಬೆಳಗುಂದಿ ಮೂಲದವರು.
ಮೃಣಾಲ್ ಹೆಬ್ಬಾಳಕರ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಸವಂತ್ ಬೆಳಗಾವಿ ಕ್ಲಬ್ ರಸ್ತೆಯಲ್ಲಿ ಕಾರಿನಿಂದ ಕೆಳಗಿಳಿದು ನಿಂತಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಚಾಕುವಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಬಸವಂತ್ ಅವರ ಎದೆ, ಭುಜ ಸೇರಿದಂತೆ ದೇಹದ ನಾಲ್ಕು ಭಾಗಗಳಿಗೆ ಮಾರಣಾಂತಿಕವಾಗಿ ಇರಿಯಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಬಸವಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣ ಗೊತ್ತಾಗಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರೀಶೀಲನೆ ನಡೆಸಿದ್ದಾರೆ. ಮೃಣಾಲ ಹೆಬ್ಬಾಳಕರ್ ಕೂಡ ಆಸ್ಪತ್ರೆಗೆ ಆಗಮಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುತ್ತಿದ್ದಾರೆ.




