Latest

*ಹಾಡಹಗಲೇ ಉದ್ಯಮಿ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ*

ಪ್ರಗತಿವಾಹಿನಿ ಸುದ್ದಿ; ಹಾಡಹಗಲೇ ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿ ಮನಬಂದಂತೆ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.

ಉದ್ಯಮಿ ಶಿವಕುಮಾರ್ ಎಂಬುವವರ ಮೇಲೆ 8 ಬಾರಿ ದುಷ್ಕರ್ಮಿ ಫೈರಿಂಗ್ ಮಾಡಿದ್ದು, ಶಿವಕುಮಾರ್ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಉದ್ಯಮಿ ಶಿವಕುಮಾರ್ ತಮ್ಮ ಫಾರ್ಚುನರ್ ಕಾರಿನಲ್ಲಿ ಇದ್ದರು. ಈ ವೇಳೆ ಅನುದೀಪ್ ಎಂಬಾತ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ.

ಕ್ಷುಲ್ಲಕ ಕಾರಣಕ್ಕಾಗಿ ಅನುದೀಪ್, ಉದ್ಯಮಿ ಶಿವಕುಮಾರ್ ಮೇಲೆ ಗುಂಡು ಹಾರಿಸಿದ್ದು, ಕುಶಾಲ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button