ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ವೈದ್ಯರು, ನರ್ಸ್ ಸೇರಿ 31 ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ಕೊಡಗು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.
ಮೆಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರತಿದಿನ ನೂರಾರು ಸೋಂಕಿತರು ದಾಖಲಾಗುತ್ತಿದ್ದಾರೆ. ಇದೀಗ ಕೋವಿಡ್ ಆಸ್ಪತ್ರೆಯ 8 ವೈದ್ಯರು, ನರ್ಸ್ ಗಳು, ಮೆಡಿಕಲ್ ಆಫಿಸರ್ಸ್ ಸೇರಿ 31 ಸಿಬ್ಬಂದಿಗಳಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಎಲ್ಲರನ್ನೂ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಕೋವಿಡ್ ಆಸ್ಪತ್ರೆಯಲ್ಲಿ ಒಟ್ಟು 123 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅವರಲ್ಲಿ 31 ಸಿಬ್ಬಂದಿಗಳು ಸೋಂಕಿನಿಂದ ಬಳಲುತ್ತಿದ್ದು, ಇದೀಗ ವೈದ್ಯಕೀಯ ಸಿಬ್ಬಂದಿ ಕೊರತೆ ಎದುರಾಗಿದೆ.
ಈ ನಡುವೆ ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 24ರ ಬಳಿಕವೂ 10 ದಿನಗಳ ಕಠಿಣ ಲಾಕ್ ಡೌನ್ ಘೋಷಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.
ಕೋವಿಡ್ -19: ಸಹಾಯಕ್ಕಾಗಿ ವಾರ್ಡ್ ಅಧಿಕಾರಿಗಳ ನೇಮಕ; ಇಲ್ಲಿದೆ ಸಂಪರ್ಕ ಸಂಖ್ಯೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ