*ಬೆಚ್ಚಿ ಬೀಳಿಸುವಂತಿದೆ ಕೊಡಗಿನಲ್ಲಿ ನಡೆದ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ: 9 ತಿಂಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿ; 59 ಪೋಕ್ಸೋ ಪ್ರಕರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲಿಯೂ ಕೊಡಗು ಜಿಲ್ಲೆಯಲ್ಲಿ ಪತ್ತೆಯಾದ ಅಪ್ರಾಪ್ತ ಬಾಲಕಿಯರ ಗರ್ಭಿಣಿ ಪ್ರಕರಣ, ಲೈಂಗಿಕ ದೌರ್ಜನ್ಯ ಕೇಸ್ ಗಳು ಬೆಚ್ಚಿ ಬೀಳುವಂತಿದೆ.
ಕಳೆದ 9 ತಿಂಗಳಲ್ಲಿ ಕೊಡಗು ಜಿಲ್ಲೆಯಲ್ಲಿ 59 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. 9 ತಿಂಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿಯರಾಗಿರುವುದು ಬೆಳಕಿಗೆ ಬಂದಿದೆ. ಅವರಲ್ಲಿ ಈಗಾಗಲೇ 14 ಬಾಲಕಿಯರಿಗೆ ಹೆರಿಗೆಯಾಗಿದ್ದು, ಓರ್ವ ಅಪ್ರಾಪ್ತೆಗೆ ಗರ್ಭಪಾತವಾಗಿದೆ.
ಕೊಡಗಿನ ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಹೆಚ್ಚು ಪ್ರಕರಣ ಬೆಳಕಿಗೆ ಬಂದಿದೆ. 43 ಸಂತ್ರಸ್ತೆಯರು ಪತ್ತೆಯಾಗಿದ್ದು, 43 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ತೋಟದ ಮನೆಗಳಲ್ಲೇ ಬಾಲಕಿಯರ ಮೇಲೆ ಅತಿ ಹೆಚ್ಚು ಇಂತಹ ಕೃತ್ಯಗಳು ನಡೆದಿರುವುದು ಪತ್ತೆಯಾಗಿದೆ. ಜಿಲ್ಲೆಯಲ್ಲಿ 5 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿವೆ.
ಇಂತಹ ಪ್ರಕರಣ ತಡೆಗಟ್ಟಲು ಜಿಲ್ಲಾಡಳಿತ ಮುಂದಾಗಿದ್ದು, ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ