Kannada NewsKarnataka NewsLatest

*ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು*: *ಪತಿ-ಪತ್ನಿ-ಮಗು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಕೆರೆಗೆ ಉರುಳಿ ಬಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾರಿನಲ್ಲಿದ್ದ ದಂಪತಿ ಹಾಗೂ ಅವರ ನಾಲ್ಕು ವರ್ಷದ ಹೆಣ್ಣು ಮಗು ಸೇರಿ ಮೂವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದೆ.

ಹಬ್ಬದ ವಾತಾವರಣದ ನಡುವೆಯೇ ಈ ದುರಂತ ನಡೆದಿದ್ದು, ಇಡೀ ಗ್ರಾಮದಲ್ಲಿ ಶೋಕ ಆವರಿಸಿದೆ. ಮೃತರನ್ನು ಸಿದ್ದಾಪುರ ಹೈಸ್ಕೂಲ್ ಪೈಸಾರಿ ನಿವಾಸಿಗಳಾದ ವಿಜೇಶ್ (36), ಅವರ ಪತ್ನಿ ಪಮಿತ (34) ಹಾಗೂ ನಾಲ್ಕು ವರ್ಷದ ಮಗಳು ಲಿಯ ಎಂದು ಗುರುತಿಸಲಾಗಿದೆ.

ಸೋಮವಾರ ರಾತ್ರಿ ಸಿದ್ದಾಪುರದಿಂದ ಬಾಣಂಗಾಲ ಗ್ರಾಮದ ತಮ್ಮ ಮನೆಗೆ ಸ್ಯಾಂಟ್ರೋ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿದೆ. ಪರಿಣಾಮ ಕಾರಿನೊಳಗೆ ಸಿಲುಕಿದ ಮೂವರು ನೀರಿನೊಳಗೆ ಮುಳುಗಿ ಮೃತಪಟ್ಟಿದ್ದಾರೆ. ಬೆಳಗ್ಗೆ ತೋಟದ ಕಾರ್ಮಿಕರು ಕಾರನ್ನು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಪರಿಶೀಲನೆ ನಡೆಸಿದಾಗ ಕಾರಿನೊಳಗಿದ್ದ ಮೂವರು ಮೃತಪಟ್ಟಿರುವುದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button