Latest

ಕರ್ನಾಟಕದ ಕಾಶ್ಮೀರವನ್ನು ರಕ್ಷಿಸಲು ಯಾವ ಪಕ್ಷಗಳಿಂದಲೂ ಸಾಧ್ಯವಾಗುತ್ತಿಲ್ಲ

ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚುತ್ತಲೇ ಇವೆ. ಕರ್ನಾಟಕದ ಕಾಶ್ಮೀರ ಕೊಡಗು ಜನರ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ಸರ್ಕಾರವೂ ವಿಫಲವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಬ್ರಹ್ಮಗಿರಿ ಬೆಟ್ಟ ಭೂಕುಸಿತದಲ್ಲಿ ಕಣ್ಮರೆಯಾದ ಅರ್ಚಕರ ಕುಟುಂಬದ ರಕ್ಷಣಾ ಕಾರ್ಯಚರಣೆ ಪರಿಶೀಲಿಸಿ ನೊಂದ ಕುಟುಂಬದವರಿಗೆ ಸಾಂತ್ವನ ಹೇಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ‘ಕರ್ನಾಟಕದ ಕಾಶ್ಮೀರ’ ಎಂದೇ ಕರೆಸಿಕೊಳ್ಳುವ ಕೊಡಗು ಜಿಲ್ಲೆ ರಾಜ್ಯದ ಬೊಕ್ಕಸಕ್ಕೆ ಅಪಾರ ಆದಾಯ ತಂದುಕೊಡುತ್ತದೆ. ಇಲ್ಲಿ ಹುಟ್ಟಿ ಹರಿಯುವ ಕಾವೇರಿಯಿಂದಲೇ ಹಲವು ಜಿಲ್ಲೆಗಳು ಬದುಕಿವೆ. ಇಂತಹ ಜಿಲ್ಲೆಯಲ್ಲಿ ಮಳೆ ಪ್ರವಾಹ ಬಂದು ಮೂರು ವರ್ಷಗಳಿಂದ ಆಸ್ತಿ ಪಾಸ್ತಿಯೆಲ್ಲಾ ನಷ್ಟವಾಗುತ್ತಿರುವಾಗ ಆಡಳಿತದಲ್ಲಿರುವ ಬಿಜೆಪಿ ಸೇರಿದಂತೆ ಯಾವ ಪಕ್ಷಗಳು ಕೂಡ ಅದನ್ನು ರಕ್ಷಿಸುವ ಕೆಲಸ ಮಾಡುತ್ತಿಲ್ಲ ಎಂದರು.

ಕೊಡಗಿನ ಜನರಿಗೆ ಸಿಗಬೇಕಾಗಿರುವ ಸೌಲಭ್ಯಗಳ ದೊರಕಿಸುವಲ್ಲಿ ಇಲ್ಲಿಯ ಶಾಸಕರು ವಿಫಲರಾಗಿದ್ದಾರೆ ಎಂದು ಗುಡುಗಿದರು.

ಕೊಡಗು ಜಿಲ್ಲೆಯ ತಲಕಾವೇರಿ ದೇವಾಲಯದ ಬಳಿಯ ಬ್ರಹ್ಮಗಿರಿ ಬೆಟ್ಟ ಕುಸಿತಗೊಂಡು ತಲಕಾವೇರಿ ಪ್ರಧಾನ ಅರ್ಚಕರ ಕುಟುಂಬದ ಒಟ್ಟು ಐವರು ಕಣ್ಮರೆಯಾಗಿದ್ದು, ಎರಡು ದಿನಗಳ ನಿರಂತರ ಶೋಧಕಾರ್ಯದ ಬಳಿಕ ಓರ್ವರ ಮೃತದೇಹ ನಿನ್ನೆ ಪತ್ತೆಯಾಗಿತ್ತು. ಇನ್ನೂ ನಾಲ್ವರ ಪತ್ತೆಗಾಗಿ ಎನ್ ಡಿ ಆರ್ ಎಫ್ ತಂಡ ಕಾರ್ಯಾಚರಣೆಯಲ್ಲಿ ನಿರತವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button