
ಪ್ರಗತಿವಾಹಿನಿ ಸುದ್ದಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಅಣ್ಣ, ತಂಗಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ಈ ಘಟನೆ ನಡೆದಿದೆ. ಯಶೋಧಾ(45), ಕುಂಞರಾಮ(47) ಮೃತ ದುರ್ದೈವಿಗಳು. ಆರೋಪಿ ಚಂದು(65) ಎಂಬಾತನನ್ನುಪೊಲೀಸರು ಬಂಧಿಸಿದ್ದಾರೆ.
ಕುಡಿದ ಮತ್ತಿನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಒಡ ಹುಟ್ಟಿದವರನ್ನು ಆರೋಪಿ ಕೊಂದಿದ್ದು, ಸ್ಥಳಕ್ಕೆ ಕೊಡಗು ಎಸ್ಪಿ ಬಿಂದುಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



