ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ಗ್ರಾಮ ಪಂಚಾಯ್ತಿ ಸದಸ್ಯೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕಿದ್ದು, ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಮತ್ತೋರ್ವನ ಶವ ಒಂದೇ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಪಂಚಾಯ್ತಿ ಸದಸ್ಯೆ ಕಮಲಾ (35) ಹಾಗೂ ಮುತ್ತು (50) ಎಂಬುವವರು ನಿನ್ನೆಯಿಂದ ನಾಪತ್ತೆಯಾಗಿದ್ದರು. ಇದೀಗ ಇಬ್ಬರು ಒಂದೇ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮುತ್ತು ಕಮಲಾಳ ಸಂಬಂಧಿ ಎಂದು ತಿಳಿದುಬಂದಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಶವ ರೈಲ್ವೆ ಹಳಿ ಮೇಲೆ ಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ