Belagavi NewsBelgaum NewsKannada NewsKarnataka NewsLatest

*ಮಹಿಳೆಗೆ ಮುಖ್ಯಮಂತ್ರಿಯಾಗುವ ಯೋಗವಿದೆ; ಕೋಡಿಮಠದ ಶ್ರೀಗಳ ಭವಿಷ್ಯ*

ಭಾರತದಲ್ಲಿ ಜಲಪ್ರಳಯದ ಆತಂಕವಿದೆ ಎಂದ ಸ್ವಾಮೀಜಿ


ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಮಹಿಳೆಯರಿಗೆ ಮುಖ್ಯಮಂತ್ರಿಯಾಗುವ ಯೋಗ ಬರಲಿದೆ ಎಂದು ಕೋಡಿಮಠದ ಡಾ ಶಿವಾನಾಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಬೆಳಗಾವಿ ರಾಮತೀರ್ಥ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದ ಬಗ್ಗೆ ಈಗ ಏನೂ ಹೇಳುವುದಿಲ್ಲ. ಆದರೆ ಸರಕಾರಕ್ಕೆ ತೊಂದರೆ ಇಲ್ಲ. ಮುಂದೊಂದು ದಿನ ಮಹಿಳೆರಿಗೆ ಮುಖ್ಯಮಂತ್ರಿಯಾಗುವ ಯೋಗ ಬರಲಿದೆ ಎಂದರು.

ಶಾಸಕರ ಪಕ್ಷಾಂತರ ಪರ್ವದ ಬಗ್ಗೆ ಈ ಹಿಂದೆಯೇ ಮುನ್ಸೂಚನೆ ನೀಡಿದ್ದೆ. ಅದರಂತೆ ಆಗುತ್ತಿದೆ. ರಾಜಕೀಯದಲ್ಲಿ ಅಲ್ಲೋಲ, ಕಲ್ಲೋಲವಾಗಲಿದೆ ಎಂದು ಹೇಳಿದ್ದೆ ಈಗ ಅದು ಅಸ್ಥಿರತೆ ಉಂಟಾಗಿದೆ ಎಂದು ಹೇಳಿದರು.

ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಇದರಿಂದ ಸಾಕಷ್ಟು ನೋವುಗಳು ಸಂಬಂಧಿಸಬಹುದು. ವಿಪರೀತ ಮಳೆಯಿಂದ ಎರಡು ದೇಶಗಳು ನಾಶವಾಗಲಿವೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ ಎಂದು ಆಘಾತಕಾರಿ ಭವಿಷ್ಯ ನುಡಿದರು. ಅಲ್ಲದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ. ಭೂಕಂಪನಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ಸಂಭವಿಸಲಿವೆ. ವಿಷಾನೀಲ ಬೀಸುವ ಪ್ರಸಂಗವೂ ಇದೆ, ಅದು ಎಲ್ಲ ಕಡೆಯೂ ವ್ಯಾಪಿಸಲಿದೆ ಎಂದು ಹೇಳಿದ್ದಾರೆ.

ದಕ್ಷಿಣ ಭಾರತದಲ್ಲಿ ಸಮೃದ್ಧಿಯಾಗುವ ಲಕ್ಷಣಗಳಿವೆ. ಕೆಲ ಕಡೆಗಳಲ್ಲಿ ಭೂಕಂಪನದಿಂದ ದೊಡ್ಡ ದೊಡ್ಡ ನಗರಗಳಿಗೆ ಅಪಾಯವಿದೆ. ಇದ್ದಕ್ಕಿದ್ದಂತೆ ಜನರ ಸಾವಾಗುವ ಲಕ್ಷ್ಮಣಗಳು ಹೆಚ್ಚಾಗಲಿವೆ. ಇದರಿಂದ ಜಾಗತಿಕ ಮಟ್ಟದಲ್ಲಿ ವಿಷಾನೀಲದ ಪರಿಣಾಮ ಭಾರತದ ಮೇಲೂ ಆಗಲಿದೆ. ಈ‌ ಹಿನ್ನೆಲೆಯಲ್ಲಿ ಜಗತ್ತಿನ ಸಾಮ್ರಾಟಗಳ ತಲ್ಲಣಗೊಳ್ಳುವ ಪ್ರಸಂಗವೂ ಹೆಚ್ಚಿದ್ದು ಜನರು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ಚಂದ್ರಯಾನ-3 ಯಶಸ್ವಿಯಾಗಿ ಒಳ್ಳೆಯದಾಗಲಿದೆ ಎಂದ ಅವರು, ಲೋಕಸಭೆ ಚುನಾವಣೆ ಫಲಿತಾಂಶ ಬಗ್ಗೆ ಹೇಳಲು ಇನ್ನೂ ಸಮಯವಿದೆ, ನೋಡಿ ಹೇಳುತ್ತೇವೆ ಎಂದರು.

ದೈವದ ಬಲ ಮನುಷ್ಯನಿಗೆ ಮುಖ್ಯವಾಗಿ ಬೇಕು. ಯಾರು ದೈವ ನಂಬುತ್ತಾರೆ ಅಂಥವರಿಗೆ ಯಾವುದೇ ತೊಂದರೆಯಿಲ್ಲ. ಇಲ್ಲವಾದರೆ ಆಪತ್ತು, ಸಾವುಗಳು ಸಂಭವಿಸುತ್ತವೆ. ಕೆಲವರಿಗೆ ದೈವಬಲ, ಗುರುಬಲ ಇದ್ದರೂ ತೊಂದರೆ ಆಗುತ್ತದೆ. ಅದು ಪ್ರಕೃತಿ ನಿಯಮ. ಪ್ರಾಕೃತಿಕ ದೋಷದಿಂದಲೇ ಸಾವುನೋವು ಹೆಚ್ಚುತ್ತಿವೆ. ಆಹಾರ ಪದ್ಧತಿಯಲ್ಲಿ ಬದಲಾವಣೆ ಆಗಿದೆ. ಕೆಮಿಕಲ್ ಮಿಶ್ರಿತ ಆಹಾರ ಸೇವನೆ ಹೆಚ್ಚಾಗುತ್ತಿದೆ. ಸೀಮೆ ಗೊಬ್ಬರ, ದನದ ಗೊಬ್ಬರ ಹಾಕಿ ಮೊದಲು ರೈತರು ಬೆಳೆಗಳನ್ನು ಬೆಳೆಯುತ್ತಿದ್ದರು. ಈಗ ಕೆಮಿಕಲ್ ಸಿಂಪಡಣೆ ಮಾಡಿ ಹಣ್ಣಿಗೂ ಕೆಮಿಕಲ್ ಹಾಕಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಮನುಷ್ಯ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಇದರಿಂದ ಪ್ರಕೃತಿಯ ದೋಷ ಮನುಕುಲದ ಮೇಲೆ ಇದೆ. ಮೊದಲು ಅಂತರ್ಜಲ‌ ಹೆಚ್ಚಿತ್ತು, ಈಗ ಆಳವಾಗಿ ಬೋರವೆಲ್ ಕೊರೆಸಬೇಕು. ಹೀಗಾಗಿ ಪ್ರಳಯ ಹೆಚ್ಚಾಗುತ್ತಿದೆ ಎಂದರು. ಮನುಷ್ಯ ಅತಿವೇಗದಲ್ಲಿ ಹಣ ಮಾಡಲು ಹೊರಟಿದ್ದಾನೆ, ಹೀಗಾಗಿ ಆಪತ್ತುಗಳು ಬರುತ್ತಿವೆ. ಇದೆಲ್ಲದರ ನಿಯಂತ್ರಣಕ್ಕೆ ಭಗವಂತನಿದ್ದಾನೆ.

ಮನುಷ್ಯ ಈತನನ್ನು ಮರೆತಿದ್ದಾನೆ. ದೈವ, ನಂಬಿಕೆ ಮೇಲೆ ಜೀವನ ಮಾಡಬೇಕು. ಇವುಗಳನ್ನು ಕಳೆದುಕೊಂಡ ಪರಿಣಾಮವೇ ಅನಾಹುತ ಆಗುತ್ತಿವೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button