Latest

ಕಾಲೇಜುಗಳಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದೆ ಆದರೆ ಹೆಸರು ಹೇಳಲ್ಲ ಎಂದ ಸಂಸದ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಬಳಕೆಯಾಗುತ್ತಿರುವುದು ನಿಜ. ಮೈಸೂರಿನ ಕಾಲೇಜಿನಲ್ಲಿ ಕೂಡ ಡ್ರಗ್ಸ್ ದಂಧೆ ನಡೆಯುತ್ತಿದೆ. ಆದರೆ ಅದು ಯಾವ ಕಾಲೇಜು ಎಂದು ನಾನು ಹೇಳುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ರಾಜ್ಯದಲ್ಲಿ ಡ್ರಗ್ಸ್ ಜಾಲ ವ್ಯಾಪಕವಾಗಿ ಹರಡಿದ್ದು, ಶಾಲಾ-ಕಾಲೇಜುಗಳಲ್ಲೂ ನಡೆಯುತ್ತಿದೆ ಎಂಬ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆಗೆ ಸಹಮತ ವ್ಯಕ್ತಪಡಿಸಿರುವ ಸಂಸದ ಪ್ರತಾಪ್ ಸಿಂಹ, ಮೈಸೂರಿನ ಹಲವು ಕಾಲೇಜುಗಳಲ್ಲಿ ಡ್ರಗ್ಸ್ ಜಾಲ ಇದೆ. ಯಾವ ಕಾಲೇಜು ಎಂದು ನಾನು ಹೆಸರು ಹೇಳಲಾಗದು. ಮಧ್ಯಪಾನ, ಧೂಮಪಾನ ಮಾಡಿದರೆ ಪೋಷಕರಿಗೆ ಗೊತ್ತಾಗುತ್ತದೆ. ಡ್ರಗ್ಸ್ ಸೇವನೆ ಮಾಡಿದರೆ ಪೋಷಕರಿಗೂ ಗೊತ್ತಾಗುವುದಿಲ್ಲ. ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದರು.

ಇದೇ ವೇಳೆ ಡ್ರಗ್ಸ್ ಪ್ರಕರಣ ಸಂಬಂಧ ಪೊಲೀಸರು ಕೆಲ ನಟಿಯರನ್ನು ಮಾತ್ರ ಬಂಧಿಸಿದ್ದಾರೆ. ಆದರೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ನೇರವಾಗಿ ಹೆಸರಿಸಿರುವ ಶಾಸಕ ಜಮೀರ್ ಅಹ್ಮದ್ ಅವರನ್ನು ಯಾಕೆ ಇನ್ನೂ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

Home add -Advt

Related Articles

Back to top button