ಆ.11ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಕೊಕಟನೂರು ನೂತನ ಬಸ್ ನಿಲ್ದಾಣ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗದ ಅಥಣಿ ಘಟಕದ ನೂತನ ಕಟ್ಟಡ ಹಾಗೂ ಕೊಕಟನೂರು ನೂತನ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭ ಆ. 11 ರಂದು ಬೆಳಗ್ಗೆ 11 ಗಂಟೆಗೆ ಕೊಕಟನೂರು ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಭಾರಿ ಮತ್ತು ಮಧ್ಯಮ ನೀರಾವರಿ ಸಚಿವ ಡಿ.ಕೆ.ಶಿವಕುಮಾರ, ಲೋಕೊಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಅಥಣಿ ಶಾಸಕ ಲಕ್ಷ್ಮಣ ಸವದಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳಲಿದ್ದಾರೆ.
ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೋಲ್ಲೆ, ರಾಜ್ಯಸಭೆ ಸಂಸದ ಈರಣ್ಣ ಕಡಾಡಿ, ಬೆಳಗಾವಿ ಸಂಸದೆ ಮಂಗಲ ಅಂಗಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತಿತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ