Kannada NewsKarnataka NewsLatest

*ನಿಂತಿದ್ದ ಕಾರಿನಲ್ಲಿ ವೈದ್ಯ ಅನುಮಾನಾಸ್ಪದ ಸಾವು; ಆಘಾತಕಾರಿ ಮಾಹಿತಿ ಬಹಿರಂಗ*

ಪ್ರಗತಿವಾಹಿನಿ ಸುದ್ದಿ; ಕೊಡಗು: ಸರ್ಕಾರಿ ಆಸ್ಪತ್ರೆ ವೈದ್ಯನೊರ್ವ ನಿಂತಿದ್ದ ಕಾರಿನಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಗ್ರಾಮದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಿಂತಿದ್ದ ಕಾರಿನಲ್ಲಿ ವೈದ್ಯ ಸತೀಶ್ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

Home add -Advt

ಮಂಡ್ಯ ಜಿಲ್ಲೆಯ ಶಿವಳ್ಳಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದ ಡಾ.ಸತೀಸ್ ಮೈಸೂರಿನ ಕೊಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚೆಗೆ ಬೆಳಕಿಗೆ ಬಂದ 900 ಭ್ರೂಣ ಹತ್ಯೆ ಪ್ರಕರಣದಲ್ಲಿ ವೈದ್ಯ ಸತೀಶ್ ಹೆಸರು ಕೂಡ ಕೇಳಿಬಂದಿತ್ತು.

ಬಂಧಿತ ಆರೊಪಿಗಳ ವಿಚಾರಣೆ ವೇಳೆ ವೈದ್ಯನ ಹೆಸರನ್ನು ಬಾಯ್ಬಿಟ್ಟಿದ್ದರು ಎನ್ನಲಾಗಿದೆ. ಅಲ್ಲದೇ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವೈದ್ಯ ಸತೀಶ್ ತಲೆಮರೆಸಿಕೊಂಡಿದ್ದ. ಈಗ ಭ್ರೂಣ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ಸಿಕ್ಕಿಬೀಳುವ ಭಯದಿಂದ ವೈದ್ಯ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ. ವೈದನ ಸಾವು ಹಲವಾರು ಅನುಮಾನಕ್ಕೆ ಕಾರಣವಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.

Related Articles

Back to top button