Karnataka NewsLatest

*ಜಿಲ್ಲಾಸ್ಪತ್ರೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ನೌಕರ*

ಪ್ರಗತಿವಾಹಿನಿ ಸುದ್ದಿ: ಜಿಲ್ಲಾಸ್ಪತ್ರೆಯ ನೌಕರರೊಬ್ಬರು ಆಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಹರೀಶ್ ಬಾಬು (33) ಆತ್ಮಹತ್ಯೆ ಮಾಡಿಕೊಂಡ ನೌಕರ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನಾಯಕನಹಳ್ಳಿ ನಿವಾಸಿಯಾಗಿದ್ದ ಹರೀಶ್ ಬಾಬು ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು.

Home add -Advt

ಇದೀಗ ಏಕಾಏಕಿ ಆಸ್ಪತ್ರೆಯ ಇಎನ್ ಟಿ ವಿಭಾಗದ ಕೊಠಡಿಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button