*ಜಿಲ್ಲಾಸ್ಪತ್ರೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ನೌಕರ*

ಪ್ರಗತಿವಾಹಿನಿ ಸುದ್ದಿ: ಜಿಲ್ಲಾಸ್ಪತ್ರೆಯ ನೌಕರರೊಬ್ಬರು ಆಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಹರೀಶ್ ಬಾಬು (33) ಆತ್ಮಹತ್ಯೆ ಮಾಡಿಕೊಂಡ ನೌಕರ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನಾಯಕನಹಳ್ಳಿ ನಿವಾಸಿಯಾಗಿದ್ದ ಹರೀಶ್ ಬಾಬು ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಇದೀಗ ಏಕಾಏಕಿ ಆಸ್ಪತ್ರೆಯ ಇಎನ್ ಟಿ ವಿಭಾಗದ ಕೊಠಡಿಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Home add … Continue reading *ಜಿಲ್ಲಾಸ್ಪತ್ರೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ನೌಕರ*