
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಕೆ.ಎಸ್.ಆರ್.ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಮುಷ್ಕರ ನಡೆಸುತ್ತಿದ್ದು, ಜಿಲ್ಲೆ ಜಿಲ್ಲೆಗಳಲ್ಲಿಯೂ ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ.
ಕೋಲಾರದ ಬಸ್ ನಿಲ್ದಾಣದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ, ಮುಂಜಾನೆಯಿಂದಲೇ ಕೋಲಾರದಲ್ಲಿ ಬಸ್ ಸಂಚಾರ ಬಂದ್ ಆಗಿತ್ತು. ಹತ್ತುಗಂಟೆ ವೇಳೆಗೆ ಅಧಿಕಾರಿಗಳು ಕೋಲಾರ ಬಸ್ ನಿಲ್ದಾಣಕ್ಕೆ ಒಂದೆರಡು ಬಸ್ ಗಳನ್ನು ಕಳುಹಿಸಿದ್ದಾರೆ.
ಈ ವೇಳೆ ಕಿಡಿಗೇಡಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಸ್ ನ ಗಾಜುಗಳು ಪುಡಿ ಪುಡಿಯಾಗಿವೆ.