Kannada NewsKarnataka NewsLatest

*ಐದು ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ*

ಪ್ರಗತಿವಾಹಿನಿ ಸುದ್ದಿ: 5 ವರ್ಷದ ಮಗಳನ್ನು ಹತ್ಯೆಗೈದ ತಂದೆ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ಘಟನೆ ನಡೆದಿದೆ. ಲೋಕೇಶ್ (32) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕೌಟುಂಬಿಕ ಕಲಹದಿಂದ ಬೇಸತ್ತು ಪತ್ನಿ ನಾಪತ್ತೆಯಾಗಿದ್ದಳು. ಇದರಿಂದ ಬೇಸರಗೊಂಡಿದ್ದ ಲೋಕೇಶ್, 5 ವರ್ಷದ ಮಗಳು ನಿಹಾರಿಕಾಳ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ.

ಬಳಿಕ ಮಗಳ ಶವ ಕಾರಲ್ಲಿ ಇಟ್ಟು ತಾನು ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button