
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಯ ಆವರಣದಲ್ಲಿದ್ದ ಸಂಪ್ ಗೆ ಬಿದ್ದು ಮೂರನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕಡದನಹಳ್ಳಿ ಶಾಲೆಯಲ್ಲಿ ಈ ದುರಂತ ಸಂಭವಿಸಿದೆ. ನರೇಂದ್ರ (9) ಮೃತ ವಿದ್ಯಾರ್ಥಿ.
ಎಂದಿನಂತೆ ಇಂದು ಬೆಳಿಗ್ಗೆ ವಿದ್ಯಾರ್ಥಿ ನರೇಂದ್ರ ಶಾಲೆಗೆ ಬಂದವನು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾನೆ. ವಿದ್ಯಾರ್ಥಿಗಾಗಿ ಶಿಕ್ಷಕರು, ಸಿಬ್ಬಂದಿ, ಪೋಷಕರು ತೀವ್ರ ಹುಡುಕಾಟ ನಡೆಸಿದ್ದಾರೆ. ಆದರೆ ಎಲ್ಲಿಯೂ ಬಾಲಕ ಪತ್ತೆಯಾಗಿರಲಿಲ್ಲ. ಮಧ್ಯಾಹ್ನದ ಬಳಿಕ ಬಾಲಕ ಶಾಲೆ ಆವರಣದಲ್ಲಿದ್ದ ಸಂಪ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಮಾಸ್ತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



