Kannada NewsKarnataka NewsLatest

*ನೀರೆಂದು ಕೀಟನಾಶಕ ಸೇವಿಸಿ ಇಬ್ಬರು ಕಾರ್ಮಿಕರು ಸಾವು*

ಪ್ರಗತಿವಾಹಿನಿ ಸುದ್ದಿ: ನೀರೆಂದು ಕೀಟನಾಶಕ ಸೇವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗುಂಟಪಲ್ಲಿ ಗ್ರಾಮದಲ್ಲಿ ಈ ದುರಂತ ನಡೆದಿದೆ. ಕೋಳಿಫಾರಂಗೆ ಸಿಂಪಡಿಸಲು ತಂದಿದ್ದ ಕೀಟನಾಶಕವನ್ನು ನೀರೆಂದು ತಿಳಿದು ಕುಡಿದು ಸಾವನ್ನಪ್ಪಿದ್ದಾರೆ.

ದೇವಪ್ಪ (60) ಹಾಗೂ ದಾಸಪ್ಪ (62) ಮೃತ ದುರ್ದೈವಿಗಳು. ಕೋಳಿಫಾರಂ ಗೆ ಗೊಬ್ಬರ ತುಂಬಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಮಧ್ಯಾಹ್ನ ಊಟದ ಬಳಿಕ ನೀರು ಎಂದು ಭಾವಿಸಿ ಕೀಟನಾಶಕವನ್ನು ಸೇವಿಸಿ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆಯೇ ಇಬ್ಬರೂ ಕಾರ್ಮಿಕರು ಕೊನೆಯುಸಿರೆಳೆದಿದ್ದಾರೆ.

Home add -Advt

Related Articles

Back to top button