Latest

ಮನೆಗೆ ನುಗ್ಗಿ ವಿದ್ಯಾರ್ಥಿನಿಯನ್ನು ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು

ಪ್ರಗತಿವಾಹಿನಿ ಸುದ್ದಿ; ಕೋಲಾರ: ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದ್ವಿತಿಯ ಪಿಯುಸಿ ವಿದ್ಯಾರ್ಥಿನಿಯೋರ್ವಳನ್ನು ಹತ್ಯೆಗೈದು ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ಹೊಸಪಾಳ್ಯದಲ್ಲಿ ನಡೆದಿದೆ.

18 ವರ್ಷದ ಪ್ರಿಯಾಂಕ ಮೃತ ವಿದ್ಯಾರ್ಥಿನಿ. ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ದ್ವಿತಿಯ ಪಿಯು ವ್ಯಾಸಂಗ ಮಾಡುತ್ತಿದ್ದಳು.

Home add -Advt

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಯುವತಿಯನ್ನು ಕೊಲೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪಾಲಕರು ಮನೆಗೆ ಬರುವಷ್ಟರಲ್ಲಿ ಪ್ರಿಯಾಂಕಾ ಮಲಗಿದ್ದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ದುಷ್ಕರ್ಮಿಗಳು ಪ್ರಿಯಾಂಕಾ ಉಸಿರುಗಟ್ಟಿಸಿ ಕೊಂದಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿಯ ಸಾವು ಹಲವು ಅನುಮಾನಕ್ಕೆ ಕಾರಣವಾಗಿದ್ದು, ಸ್ಥಳಕ್ಕೆ ಕೋಲಾರ ಎಸ್ ಪಿ ಕಾರ್ತಿಕ್ ರೆಡ್ದಿ, ಎ ಎಸ್ ಪಿ ಜಾಹ್ನವಿ, ಡಿವೈ ಎಸ್ ಪಿ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button