ಪ್ರಗತಿವಾಹಿನಿ ಸುದ್ದಿ; ಕೋಲಾರ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರು ಸದಸ್ಯರು ಚಿಕಿತ್ಸೆ ಫಲಾಕಾರಿಯಾಗದೇ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಮಗು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆಗೆ ಹೆದರಿ ವಿಷ ಸೇವಿಸಿದ್ದ ಐವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐವರಲ್ಲಿ ನಿನ್ನೆ ನಾಲ್ವರು ಮೃತಪಟ್ಟಿದ್ದರೆ ಇಂದು ಬೇಳಿಗ್ಗೆ ಪುಷ್ಪಾ ಎಂಬ ಮಹಿಳೆ ಮೃತಪಟ್ಟಿದ್ದರು. ಇದೀಗ ಪುಷ್ಪಾ ಬರೆದಿರುವ ಡೆತ್ ನೋಟ್ ಪತ್ತೆಯಾಗಿದೆ.
ಗೀತಾ ಎಂಬ ಮಹಿಳೆ ಪುಷ್ಪಾ ಎಂಬುವವರ ಮಗುವನ್ನು 50 ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದಾಗಿ ಡೆತ್ ನೊಟ್ ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಮಗು ಮಾರಾಟ ಮಾಡಿರುವ ಬಗ್ಗೆ ಬಹಿರಂಗ ಪಡಿಸಿದರೆ ಮಗುವನ್ನು ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ದಿದ್ದಾಗಿ ಬರೆಯಲಾಗಿದೆ. ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.
ಪುಷ್ಪಾ ಕುಟುಂಬದ ಸದಸ್ಯರನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದರು. ವಿಚಾರಣೆಯಿಂದ ಬೇಸತ್ತ ಕುಟುಂಬ ಸದಸ್ಯರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಗೋತ್ರಿ, ನಾರಾಯಣಮ್ಮ, ಬಾಬು, ಮುನಿಯಪ್ಪ ಎಂಬ ನಾಲ್ವರು ಸದಸ್ಯರು ಚಿಕಿತ್ಸೆ ಫಲಿಸದೇ ನಿನ್ನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರೆ, ಇಂದು ಬೇಳಿಗ್ಗೆ ಪುಷ್ಪಾ ಎಂಬ ಮಹಿಳೆ ಸಾವನ್ನಪ್ಪಿದ್ದರು.
ಮಕ್ಕಳ ಕೈಯಲ್ಲಿ ಕೆಲಸ; ಪುರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ