Kannada NewsKarnataka NewsLatest

*ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ; ಮಕ್ಕಳು ಸೇರಿ 17 ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಬೈಕ್, ಟಾಟಾ ಏಸ್ ವಾಹನ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿ 17 ಜನರು ಗಾಯಗೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಂದಟ್ಟಿ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button