
ಪ್ರಗತಿವಾಹಿನಿ ಸುದ್ದಿ; ಕೋಲಾರ: ತಮ್ಮನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಆತಂಕಕ್ಕೆ ಒಳಗಾದ ಅಣ್ಣ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರದ ಗಾಂಧಿನಗರದಲ್ಲಿ ಈ ಘಟನೆ ನಡೆದಿದೆ. ನಾಗರಾಜ್ (37) ಮನೆಯಲ್ಲಿ ನೇಣಿಗೆ ಶರಣಾದ ವ್ಯಕ್ತಿ. ತಮ್ಮನಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅಣ್ಣ ನಾಗರಾಜ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಮೃತ ನಾಗರಾಜ್ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ನಾಗರಾಜ್ ಸಹೋದರನಿಗೆ ಶನಿವಾರ ಸಂಜೆ ಕೊರೊನಾ ದೃಢವಾಗಿದ್ದು, ನಂತರ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಪ್ರಾಥಮಿಕ ಸಂಪರ್ಕದಲ್ಲಿದ್ದ ತನಗೂ ಕೊರೊನಾ ತಗಲಿರುವ ಆತಂಕದಲ್ಲಿ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗಲ್ ಪೇಟೆ ಠಾನೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ