
ಪ್ರಗತಿವಾಹಿನಿ ಸುದ್ದಿ; ಕೋಲಾರ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಹೊರವಲಯದಲ್ಲಿ ನಡೆದಿದೆ.
ಎಂ.ಶ್ರೀನಿವಾಸ್ ಕೊಲೆಯಾದ ಕೊಂಗ್ರೆಸ್ ಮುಖಂಡ. ಮಾಜಿ ಸ್ಪೀಕರ್ರಮೇಶ್ ಕುಮಾರ್ ಅವರ ಆಪ್ತರಾಗಿದ್ದರು ಎಂದು ತಿಳಿದುಬಂದಿದೆ.
ಶ್ರೀನಿವಾಸಪುರ ತಾಲೂಕಿನ ಹೊರವಲಯದ ಹೊಗಳಗೆರೆ ಬಳಿ 6 ಜನರ ದುಷ್ಕರ್ಮಿಗಳ ಗುಂಪು ಎಂ.ಶ್ರೀನಿವಾಸ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ್ ಅವರನ್ನು ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರೊಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ