Kannada NewsKarnataka NewsLatest

*ಮತ್ತೊಂದು ಮರ್ಯಾದಾ ಹತ್ಯೆ ಪ್ರಕರಣ; ತಂದೆಯಿಂದಲೇ ಮಗಳ ಬರ್ಬರ ಕೊಲೆ*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಅನ್ಯಜಾತಿಯ ಯುವಕನನ್ನು ಮಗಳು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳನ್ನು ಕೊಂದು ಅಂತ್ಯಕ್ರಿಯೆ ಮಾಡಿರುವ ಘಟನೆ ಕೋಲಾರಜಿಲ್ಲೆಯ ತೊಟ್ಲಿ ಗ್ರಾಮದಲ್ಲಿ ನಡೆದಿದೆ.

ರಮ್ಯಾ (19)ಕೊಲೆಯಾದ ಯುವತಿ. ವೆಂಕಟೇಶ್ ಗೌಡ ಮಗಳನ್ನೇ ಕೊಂದ ತಂದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ರಮ್ಯಾ, ಪೋಷಕರು ಎಷ್ಟೇ ಬುದ್ಧಿವಾದ ಹೇಳಿದರೂ ಕೇಳುತ್ತಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ತಂದೆ ಆ.25ರಂದು ಮಗಳನ್ನು ಕೊಲೆ ಮಾಡಿದ್ದಾನೆ.

Related Articles

ಬಳಿಕ ಕುಟುಂಬದವರೆಲ್ಲರೂ ಸೇರಿ ಮಗಳ ಅಂತ್ಯಸಂಸ್ಕಾರ ಮಾಡಿದ್ದಾರೆ. ಈ ಬಗ್ಗೆ ಗ್ರಾಮದಲ್ಲಿ ಕೆಲವರು ಮಾತನಾಡಿಕೊಂಡಿದ್ದಾರೆ. ಪೊಲೀಸರಿಗೆ ವಿಷಯ ಗೊತ್ತಾಗುತ್ತಿದ್ದಂತೆ ವೆಂಕಟೇಶ್ ಗೌಡನನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ವಿಷಯ ಬಾಯ್ಬಿಟ್ಟಿದ್ದಾನೆ. ತಹಶೀಲ್ದಾರ್ ಹರ್ಷವರ್ಧನ್ ಜೊತೆ ಆಗಮಿಸಿದ ಪೊಲೀಸರು ರಮ್ಯಾಳನ್ನು ಹೂತಿಟ್ಟಿದ್ದ ಜಾಗವನ್ನು ಅಗೆದು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt


Related Articles

Back to top button