
ಪ್ರಗತಿವಾಹಿನಿ ಸುದ್ದಿ; ಕೋಲಾರ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಆಕ್ಸಿಜನ್ ಕೊರತೆಯಿಂದ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಸೋಂಕಿತರು ಆಕ್ಸಿಜನ್ ಇಲ್ಲದೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಸೋಂಕಿತರ ಸಾವಿಗೆ ಆಸ್ಪತ್ರೆಯ ಸಿಬ್ಬಂದಿಗಳೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಆಕ್ಸಿಜನ್ ಖಾಲಿಯಾದ ಪರಿಣಾಮ ಸೋಂಕಿಯರು ಸಾವನ್ನಪ್ಪಿದ್ದಾರೆ ಎಂಬುದು ಆಸ್ಪತ್ರೆ ಸಿಬ್ಬಂದಿಗಳ ವಾದ.
ಆದರೆ ಕುಟುಂಬದವರು ಹೇಳುವ ಪ್ರಕಾರ ಐಸಿಯುನಲ್ಲಿ 15 ರೋಗಿಗಳು ಇದ್ದರು. ರಾತ್ರಿ 11 ಗಂಟೆಗೆ ಸಿಬ್ಬಂದಿಗಳು ಏಕಾಏಕಿ ಆಕ್ಸಿಜನ್ ತೆಗೆದುಹಾಕಿದ್ದಾರೆ. ಇದರಿಂದ ಐಸಿಯುನಲ್ಲಿದ್ದ 4 ರೋಗಿಗಳು ನರಳಾಡಿ ಪ್ರಾಣಬಿಟ್ಟಿದ್ದಾರೆ. ಸಿಬ್ಬಂದಿಗಳನ್ನು ಕೇಳಿದರೆ ನಮಗೆ ಏನೂ ಗೊತ್ತಿಲ್ಲ. ಜಿಲ್ಲಾಸ್ಪತ್ರೆ ಮುಖ್ಯವೈದ್ಯರನ್ನು ಕೇಳುವಂತೆ ಹೇಳುತ್ತಾರೆ. ಅವರಿಗೆ ಕರೆ ಮಾಡಿದರೆ ಫೋನ್ ಸ್ವಿಚ್ ಆಫ್ ಬರ್ತಿದೆ. ಅಧಿಕಾರಿಗಳೂ ಯಾವುದೇ ರೀತಿ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ