*ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ ಪ್ರಮಾಣ ಹೆಚ್ಚಳ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ*
ಪ್ರಗತಿವಾಹಿನಿ ಸುದ್ದಿ; ಕೋಲಾರ: ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ ತಪ್ಪಿಸಬೇಕು. ಈ ಪ್ರಮಾಣ ಹೆಚ್ಚಾಗಿದ್ದು ಹೇಗೆ ಎಂದು ವರದಿಯೊಂದನ್ನು ತೋರಿಸಿ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕೋಲಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ ಪ್ರಮಾಣ ಹೆಚ್ಚಳವಾಗಲು ಕಾರಣವೇನು? ಎಂದು ಕೇಳಿದ್ದಾರೆ. ಅಧಿಕಾರಿಗಳಿಂದ ಸಮರ್ಪಕ ಉತ್ತರ ಬರದಿದ್ದಾಗ ಗರಂ ಆದ ಸಿಎಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸಬೇಕು. ಘಟನೆ ಮರುಕಳಿಸದಂತೆ ಎಚ್ಚರಿಸಿದರು. ಮರುಕಳಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಖಚಿತ ಎಂದು ಎಚ್ಚರಿಸಿದರು.
ಭ್ರೂಣ ಹತ್ಯೆ ಕಡ್ಡಾಯವಾಗಿ ತಪ್ಪಿಸಬೇಕು ಎಂದು ಎಸ್ಪಿ ಗೆ ಸೂಚಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ನಿಯಮ ಉಲ್ಲಂಘಿಸಿದವರ ಮೇಲೆ ಎಫ್ ಐ ಆರ್ ದಾಖಲಾಗಿದೆ ಎಂದು ವಿವರಗಳನ್ನು ನೀಡಿದರು.
ಬರಗಾಲ, ಕುಡಿಯುವ ನೀರು, ಗ್ರಾಮೀಣಾಭಿವೃದ್ಧಿ, ಕೆ.ಸಿ.ವ್ಯಾಲಿ, ಎಲಗೋಡು ಕುಡಿಯುವ ನೀರಿನ ಯೋಜನೆ, ಸಮಾಜ ಕಲ್ಯಾಣ ಇಲಾಖೆ, ಕಾನೂನು ಸುವ್ಯವಸ್ಥೆ ಕುರಿತಾಗಿ ಈ ಸಭೆಯಲ್ಲಿ ಆದ್ಯತೆ ಮೇಲೆ ಚರ್ಚೆ ನಡೆಸಲಾಯಿತು.
ಹೈಲೈಟ್ಸ್:
• ಜಿಲ್ಲಾಧಿಕಾರಿಗಳ ಮತ್ತು ತಹಶೀಲ್ದಾರ್ಗಳ ಖಾತೆಯಲ್ಲಿ ಬರ ನಿರ್ವಹಣೆಗೆ ಅಗತ್ಯವಾದ ಹಣ ಇದೆ.
• ಜನ-ಜಾನವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
• ಮೇವಿಗೆ ತೊಂದರೆ ಇಲ್ಲ . ಮುಂದಿನ ಹಲವು ವಾರಗಳಿಗೆ ಆಗುವಷ್ಟು ಮೇವು ಸಂಗ್ರಹ ಇದೆ.
• ಗುಳೆ ಹೋಗುವುದನ್ನು ತಪ್ಪಿಸಲು ಉದ್ಯೋಗ ಸೃಷ್ಟಿ ಬಗ್ಗೆ ಆದ್ಯತೆ ನೀಡಲು ಜಿಲ್ಲಾಧೀಖಾರಿಗಳಿಗೆ ಸೂಚನೆ ನೀಡಿದ್ದೇನೆ.
• ನರೇಗಾ ಉದ್ಯೋಗ 100 ರಿಂದ 150 ದಿನಗಳಿಗೆ ಹೆಚ್ಚಿಸಲು ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಇನ್ನೂ ಕೇಂದ್ರದಿಂದ ಒಪ್ಪಿಗೆ ಸಿಕ್ಕಿಲ್ಲ.
• ಕೇಂದ್ರದಿಂದ ಅನುದಾನ ಬಿಡುಗಡೆ ಆಗುವವರೆಗೂ ರೈತರಿಗೆ 2 ಸಾವಿರ ತಕ್ಷಣಕ್ಕೆ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದೇನೆ.
• ಸಣ್ಣ ಪುಟ್ಟ ಸಮಸ್ಯೆಗಳಿಗೂ ಕೋಲಾರದ ಜನ ನನ್ನ ಬಳಿಗೆ ಬಂದರೆ ಇಲ್ಲಿ ಜಿಲ್ಲಾಡಳಿತ ವಿಫಲ ಎಂದೇ ಪರಿಗಣಿಸಬೇಕಾಗುತ್ತದೆ. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಳ್ಳಿ.
• ಜನರ ಹಣದಲ್ಲಿ ನಿಮಗೆ ಸವಲತ್ತುಗಳು ಸಿಗುತ್ತಿವೆ. ಆದ್ದರಿಂದ ನಾವು ಜನರ ಪರವಾಗಿರಬೇಕು.
• ರೈತರನ್ನು ಪೊಲೀಸ್ ಮತ್ತು ಇತರೆ ಇಲಾಖೆ ಅಧಿಕಾರಿಗಳು ಸತಾಯಿಸಬಾರದು. ಇದನ್ನು ನಾನು ಸಹಿಸಲ್ಲ. ಇದನ್ನು ಎಸ್ ಪಿ ಗಳು ಗಮನಿಸಬೇಕು. ಎಸ್ಪಿ ಗಳು ಠಾಣೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು.
• ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ ತಪ್ಪಿಸಬೇಕು. ಈ ಪ್ರಮಾಣ ಹೆಚ್ಚಾಗಿದ್ದು ಹೇಗೆ ಎಂದು ಪತ್ರಿಕಾ ವರದಿಯನ್ನು ತೋರಿಸಿ ಅಧಿಕಾರಿಗಳನ್ನು ಪ್ರಶ್ನಿಸಿದರು. ಅಧಿಕಾರಿಗಳಿಂದ ಸಮರ್ಪಕ ಉತ್ತರ ಬರದಿದ್ದಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಉತ್ತರ ಬರದಿದ್ದಾಗ ಘಟನೆಗಳು ಮರುಕಳಿಸದಂತೆ ಎಚ್ಚರಿಸಿದರು. ಮರುಕಳಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಖಚಿತ ಎಂದು ಎಚ್ಚರಿಸಿದರು.
• ಬ್ರೂಣ ಹತ್ಯೆ ಕಡ್ಡಾಯವಾಗಿ ತಪ್ಪಿಸಬೇಕು ಎಂದು ಎಸ್ಪಿ ಗೆ ಸೂಚಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ನಿಯಮ ಉಲ್ಲಂಘಿಸಿದವರ ಮೇಲೆ ಎಫ್ ಐ ಆರ್ ದಾಖಲಾಗಿದೆ ಎಂದು ವಿವರಗಳನ್ನು ನೀಡಿದರು.
• ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕೋಲಾರ ಜಿಲ್ಲೆ ಪ್ರಗತಿ ಸಾಧಿಸಬೇಕು. ಆರೋಗ್ಯ ಮತ್ತು ಶಿಕ್ಷಣದಲ್ಲಿ ಮುಂದಿರಬೇಕು.
• ಮಕ್ಕಳಲ್ಲಿ ಅನಿಮೀಯ, ರಕ್ತ ಹೀನತೆ 0.6 ಹೆಚ್ಚಾಗಿದೆ. ಇದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ ಎಂದು ಡಿಹೆಚ್ಒ ಗೆ ಪ್ರಶ್ನಿಸಿದರು. ಅನಿಮಿಯ ಮುಕ್ತ ಕರ್ನಾಟಕ ನಮ್ಮ ಸರ್ಕಾರದ ಮಹತ್ವದ ಕಾರ್ಯಕ್ರಮ. ಇದನ್ನು ಪರಿಣಾಮಕರಿಯಾಗಿ ಜಾರಿ ಮಾಡಲು ಸಿಎಂ ಸೂಚಿಸಿದರು.
• ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಲ್ಲಿ ನಾವು ಊಟ ಕೊಡುತ್ತಿದ್ದೇವೆ. ಆದರೂ ರಕ್ತ ಹೀನತೆ ಪ್ರಮಾಣ 0.6 ಹೆಚ್ಚಾಗಿದ್ದು ಏಕೆ ಎಂದು ಪರಿಶೀಲಿಸಿ.ತಕ್ಷಣ ಪರಿಹಾರ ಮಾಡಿ ಎಂದು ಡಿಹೆಚ್ ಒ ಗೆ ಸೂಚಿಸಿದರು.
• 31 ಜಿಲ್ಲೆಗಳಲ್ಲಿ ತಲಾ ಆದಾಯದಲ್ಲಿ ಕೋಲಾರ 19 ನೇ ಸ್ಥಾನದಲ್ಲಿದೆ ಏಕೆ ಎಂದು ಪ್ರಶ್ನಿಸಿದ ಸಿಎಂ ಇದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳೇ ಹೊಣೆ ಎಂದು ಎಚ್ಚರಿಸಿ ಮುಂದಿನ ಸಭೆಗಳಲ್ಲಿ ಇದೆಲ್ಲಾ ಸುಧಾರಿಸಿರಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.
*ಸ್ಮಶಾನ ಮತ್ತು ಖಬರಸ್ತಾನ ಕ್ಕೆ ಅಗತ್ಯ ಜಾಗಗಳನ್ನು ಒದಗಿಸಬೇಕು. ಸರ್ಕಾರಿ ಸ್ಥಳ ಇಲ್ಲದಿದ್ದರೆ ಖರೀದಿಸಿ ಕೊಡಬೇಕು. ದಲಿತರು ಸೇರಿದಂತೆ ಯಾವುದೇ ಸಮುದಾಯ, ಧರ್ಮದವರಿಗೂ ಶವ ಸಂಸ್ಕಾರಕ್ಕೆ ತೊಂದರೆ ಆಗಕೂಡದು ಎಂದು ಸೂಚಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ