ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ಫೆ.೨೫ ರಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ೨೫ ರಂದು ಬೆಳಗ್ಗೆ ೧೦.೪೫ ಗಂಟೆಗೆ ನಂದಗಡದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ (ವೀರಭೂಮಿ) ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾತ್ರಿ ೮ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.