ಪ್ರಗತಿವಾಹಿನಿ ಸುದ್ದಿ; ಕೋಲಾರ: ನಂಗಲಿಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಹಾಗೂ ಇಬ್ಬರು ಕಾನ್ಸ್ ಟೇಬಲ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕರೆತಂದು ಅಕ್ರಮವಾಗಿ ವಿಚಾರಣೆ ನಡೆಸಿದ್ದಾಗ ಓರ್ವ ಆರೋಪಿ ಮೃತಪಟ್ಟಿದ್ದ. ಈ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ ಠಾಣೆಯ ಪಿಎಸ್ಐ ಪ್ರದೀಪ್ ಸಿಂಗ್, ಕಾನ್ಸ್ ಟೇಬಲ್ ಗಳಾದ ಮಂಜುನಾಥ್, ಮಹಾಂತೇಶ್ ಪೂಜಾರಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕಳ್ಳತನ ಕೇಸ್ ನಲ್ಲಿ ಅ.17ರಂದು ಆಂಧ್ರ ಮೂಲದ ಮುನಿರಾಜು, ಬಾಲಾಜಿ ಎಂಬುವವರನ್ನು ಕರೆತಂದು ಅಕ್ರಮವಾಗಿ ವಿಚಾರಣೆ ನಡೆಸಿದ್ದರು. ಹಿರಿಯ ಅಧಿಕಾರಿಗಳಿಗೂ ಮಾಹಿತಿ ನೀಡದೇ 15 ದಿನಗಳ ಕಾಲ ಪೊಲೀಸ್ ಠಾಣೆ, ಬೇರೆ ಬೇರೆ ಸ್ಥಳಗಳಲ್ಲಿ ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಆಂಧ್ರದ ಮದನಪಲ್ಲಿ ನಿವಾಸಿ ಮುನಿರಾಜು ಮೃತಪಟ್ಟಿದ್ದ.
ಪ್ರಕರಣ ಸಂಬಂಧ ಮುಳಬಾಗಿಲು ಡಿವೈಎಸ್ ಪಿ ನಂದಕುಮಾರ್ ವರದಿ ಆಧರಿಸಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಪಿಎಸ್ ಐ ಹಾಗೂ ಇಬ್ಬರು ಕಾನ್ಸ್ ಟೇಬಲ್ ಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ