
ಪ್ರಗತಿವಾಹಿನಿ ಸುದ್ದಿ; ಕೋಲಾರ: ಶಾಲಾ ಶಿಕ್ಷಕರೇ ವಿದ್ಯಾರ್ಥಿಗಳ ಮೇಲೆ ಅಟ್ಟಹಾಸ ಮೆರೆಯುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಎರಡು ದಿನಗಳ ಹಿಂದೆ ಪ್ರಾಂಶುಪಾಲನೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದ ಘಟನೆ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಅಂತದ್ದೇ ಘಟನೆ ನಡೆದಿದೆ.
8ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಶಿಕ್ಷಕ ಅತ್ಯಾಚಾರವೆಸಗಿರುವ ಘೋರ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಖಾಸಗಿ ಶಾಲೆಯ ವಿದ್ಯಾರ್ಥಿನಿ ಮೇಲೆ 33 ವರ್ಷದ ಶಿಕ್ಷಕ ಅತ್ಯಾಚಾರವೆಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
					
				
					
					
					
					
					
					
					

