*ವಿದ್ಯಾರ್ಥಿನಿಯರಿಗೆ ಕಿರುಕುಳ; ಶಿಕ್ಷಕನ ಮೊಬೈಲ್ ನಲ್ಲಿ ಹೆಣ್ಣುಮಕ್ಕಳ 5000 ನಗ್ನ ವಿಡಿಯೋ ಪತ್ತೆ*
ಪ್ರಗತಿವಾಹಿನಿ ಸುದ್ದಿ: ವಸತಿ ಶಾಲೆಯ ಶಿಕ್ಷಕನೊಬ್ಬ ವಿದಾರ್ಥಿನಿಯರಿಗೆ ಚಿತ್ರಹಿಂಸೆ ನೀಡಿ ನಗ್ನ ವಿಡಿಯೋ ಚಿತ್ರೀಕರಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಆತ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕನಿಗೆ ಸಂಕಷ್ಟ ಎದುರಾಗಿದೆ.
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪನ ವಿರುದ್ಧ ವಿದ್ಯಾರ್ಥಿಗಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಆತನ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದಾಗ ಹೆಣ್ಣುಮಕ್ಕಳ ನಗ್ನ ವಿಡಿಯೋ ಪತ್ತೆಯಾಗಿದೆ. ಶಿಕ್ಷಕನ ವಿರುದ್ಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು.
ಶಿಕ್ಷಕನ ಬಳಿ ಇದ್ದ ಒಟ್ಟು ನಾಲ್ಕು ಮೊಬೈಲ್ ವಶಕ್ಕೆ ಪಡೆದು ತನಿಖೆ ನಡೆಸಿದಾಗ ಆತನ ಮೊಬೈಲ್ ನಲ್ಲಿ ಹೆಣ್ಣುಮಕ್ಕಳ 5000 ನಗ್ನ ವಿಡಿಯೋ ಪತ್ತೆಯಾಗಿದೆ. ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿ, ಹಿಂಸೆ ಕೊಟ್ಟು ವಿಡಿಯೋ ಚಿತ್ರೀಕರಿಸುತ್ತಿದ್ದ . 2023ರ ಡಿಸೆಂಬರ್ ನಲ್ಲಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿತ್ತು. ಪೋಕ್ಸೋ ಕೇಸ್ ದಾಖಲಿಸಿ ಶಿಕ್ಷಕನನ್ನು ಬಂಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆತ ಹೈಕೋರ್ಟ್ ಮೆಟ್ಟಿಲೇರಿದ್ದು, ಪೋಕ್ಸೋ ಕೇಸ್ ರದ್ದು ಮಾಡುವಂತೆ ಕೋರಿದ್ದ. ಆದರೆ ಹೈಕೋರ್ಟ್ ಆತನ ವಿರುದ್ಧದ ಪೋಕ್ಸೋ ಕೇಸ್ ರದ್ದುಗೊಳಿಸಲು ನಿರಾಕರಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ