Latest

ಪ್ರಸಾದ ಸೇವಿಸಿ 12 ಮಕ್ಕಳು ಸೇರಿ 30ಕ್ಕೂ ಹೆಚ್ಚು ಜನ ಅಸ್ವಸ್ಥ

ಪ್ರಗತಿವಾಹಿನಿ ಸುದ್ದಿ; ಕೋಲಾರ: ಹೊಸ ವರ್ಷದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ನಡೆದ ವಿಶೇಷ ಪೂಜೆ ವೇಳೆ ನೀಡಿದ್ದ ಪ್ರಸಾದ ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

ಇಲ್ಲಿನ ಬೀರಗಾನಹಳ್ಳಿಯ ಗಂಗಮ್ಮ ದೇವಾಲಯದಲ್ಲಿ ಹೊಸ ವರ್ಷದ ಪ್ರಯುಕ್ತ ನಡೆದಿದ್ದ ವಿಶೇಷ ಪೂಜೆ, ಹೋಮ ಹಿನ್ನೆಲೆಯಲ್ಲಿ ಭಕ್ತರಿಗೆ ಪ್ರಸಾದವಾಗಿ ಕೇಸರಿಬಾತ್, ಚಿತ್ರಾನ್ನ ನೀಡಲಾಗಿದೆ. ಪ್ರಸಾದ ತಿಂದಿದ್ದ 12 ಮಕ್ಕಳು ಸೇರಿದಂತೆ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.

Home add -Advt

ಪ್ರಸಾದ ಸೇವಿಸಿದ್ದ ಹಲವರಲ್ಲಿ ವಾಂತಿ, ಬೇದಿ ಕಾಣಿಸಿಕೊಂಡಿದೆ. ಅಸ್ವಸ್ಥರದವರನ್ನು ಶ್ರೀನಿವಾಸಪುರ ತಾಲೂಕಿನ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ರಾಜ್ಯದಲ್ಲಿ ದೆಹಲಿ ಮಾದರಿ ಜಾರಿಗೆ ತಜ್ಞರ ಸಲಹೆ

Related Articles

Back to top button