Kannada NewsKarnataka NewsLatest

*ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ; ಕ್ಲಾಸ್ ರೂಂ ನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಮನಬಂದಂತೆ ಥಳಿತ*

ಮೊರಾರ್ಜಿ ವಸತಿ ಶಾಲೆಯಲ್ಲಿ ಮಕ್ಕಳಿಗೆ ನರಕ ಯಾತನೆ


ಪ್ರಗತಿವಾಹಿನಿ ಸುದ್ದಿ; ಕೋಲಾರ: ವಸತಿ ಶಾಲೆಯ ಮಕ್ಕಳನ್ನು ಶೌಚಾಲಯ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿರುವ ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಬೆತ್ತದಿಂದ ಹೊಡೆದು ಹಿಂಸಿಸುತ್ತಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ.

ವಸತಿ ಶಾಲೆಯಲ್ಲಿ ಮಕ್ಕಳಿಗೆ ಚಿತ್ರ ಹಿಂಸೆ ನೀಡುತ್ತಿದ್ದು, ಪೋಷಕರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳನ್ನು ವಸತಿ ಶಾಲೆಯ ಶೌಚ ಗುಂಡಿಗೆ ಇಳಿಸಿ ಸ್ವಚ್ಚತೆ ಮಾಡಿಸಿರುವ, ಶಿಕ್ಷಕರು ಕ್ಲಾಸ್ ರೂಂ ನಲ್ಲಿ ಬೆತ್ತದಿಂದ ಮಕ್ಕಳಿಗೆ ಮನ ಬಂದಂತೆ ಹೊಡೆಯುತ್ತಿರುವ, ಮಕ್ಕಳ ಬೆನ್ನಿಗೆ ಬ್ಯಾಗ್ ಹೊರಿಸಿ ಎರಡೂ ಕೈಗಳನ್ನು ಮೇಲೆತ್ತಿ ಮಂಡಿಯಲ್ಲಿ ಕುಳಿತುಕೊಳ್ಳುವಂತೆ ಶಿಕ್ಷೆ ನೀಡಿರುವ ವಿಡಿಯೋ ವೈರಲ್ ಆಗಿದೆ.

ಅಲ್ಲದೇ ವಸತಿ ಶಾಲೆಯ ಮಕ್ಕಳು ಶಿಕ್ಷಕರ ಏಟಿಗೆ ನೊಂದು ರಾತ್ರಿಯಿಡಿ ಅಳುತ್ತಾ ಮಲಗಿರುವ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ವಸತಿ ಶಾಲೆಯ ಚಿತ್ರಹಿಂಸೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button