Kannada NewsKarnataka NewsLatest

*ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ; ವಸತಿ ಶಾಲೆಯ ಪ್ರಂಶುಪಾಲೆ ಸೇರಿ ನಾಲ್ವರು ಅಮಾನತು*

ಪ್ರಗತಿವಾಹಿನಿ ಸುದ್ದಿ; ಕೋಲಾರ: ವಸತಿ ಶಾಲೆಯ ಮಕ್ಕಳನ್ನು ಶೌಚಾಲಯ ಗುಂಡಿಗೆ ಇಳಿಸಿ ಸ್ವಚ್ಚತೆ ಮಾಡಿಸಿರುವ ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಬೆತ್ತದಿಂದ ಹೊಡೆದು ಹಿಂಸಿಸುತ್ತಿರುವ ಘಟನೆಗೆ ಸಂಬಂಧಿಸಿದಂತೆ ವಸತಿ ಶಾಲೆಯ ನಾಲ್ವರು ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ.

Home add -Advt

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಇದೀಗ ವಸತಿ ಶಾಲೆಯ ಪ್ರಂಶುಪಾಲೆ ಭರತಮ್ಮ, ಶಿಕ್ಷಕ ಅಭಿಷೇಕ್, ಮುನಿಯಪ್ಪ ಹಾಗೂ ವಾರ್ಡನ್ ಮಂಜುನಾಥ್ ಅವರನ್ನು ಅಮಾನತುಗೊಳಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ ಮೇರೆಗೆ ವಸತಿ ಶಾಲೆಯ ನಾಲ್ವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿದುಬಂದಿದೆ.


Related Articles

Back to top button