ಪ್ರಗತಿವಾಹಿನಿ ಸುದ್ದಿ: ಕೋಳಿ ಅಂಕ ಕಾನೂನು ಬಾಹಿರ ಅಪರಾಧ. ಕೋಳಿ ಅಂಕ ನಡೆಸಲು ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಅವಕಾಶವಿಲ್ಲ ಎಂದು ದಕ್ಷಿಣ ಕನ್ನಡ ಎಸ್ ಪಿ ರಿಷ್ಯಂತ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು. ಇಂತಹ ಅಕ್ರಮ ಚಟುವಟಿಕೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇತ್ತೀಚೆಗೆ ನಡೆದ ಉಸ್ತುವಾರಿ ಸಚಿವರ ಸಭೆಯಲ್ಲಿ ಕೋಳಿ ಅಂಕಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಜಿಲ್ಲಾಧಿಕಾರಿ ಕೋಳಿ ಅಂಕ ನಡೆಸಲು ಅವಕಾಶವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ