CrimeKannada NewsLatestNational

*ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ: ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್; ಫಾರ್ಮಸಿ ವಿದ್ಯಾರ್ಥಿ ಮೊಬೈಲ್ ನಲ್ಲಿ 350ಕ್ಕೂ ಹೆಚ್ಚು ವಿಡಿಯೋಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಫಾರ್ಮಸಿ ವಿದ್ಯಾರ್ಥಿಯೊಬ್ಬ ಹಲವು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಕೊಲ್ಲಾಪುರದ ಫಾರ್ಮಸಿ ವಿದ್ಯಾರ್ಥಿ 22 ವರ್ಷದ ಶಾಹಿದ್ ಸಮೀರ್ ಎಂಬಾತ ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು, ಸ್ನೇಹ ಬೆಳೆಸಿ ಅವರನ್ನು ಕೊಲ್ಹಾಪುರ ಮತ್ತು ಶಿರೋಲಿಯ ಲಾಡ್ಜ್‌ಗಳಿಗೆ ಕರೆದೊಯ್ಯುತ್ತಿದ್ದ. ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಿ, ರಹಸ್ಯವಾಗಿ ವಿಡಿಯೋಗಳನ್ನು ರೆಕಾರ್ಡ್ ಮಾಡುತ್ತಿದ್ದ. ಈ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ವಿಷಯ ಬಾಯ್ಬಿಟ್ಟರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ.

Home add -Advt

ಈತನಿಂದ ದೌರ್ಜನ್ಯಕ್ಕೊಳಗಾದ 20 ವರ್ಷದ ಯುವತಿಯೊಬ್ಬಳು ಪೊಲಿಸ್ ಠಾಣೆಗೆ ಹಾಜರಾಗಿ ದೂರು ದಾಖಲಿಸಿದ್ದಳು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿ ಶಾಹಿದ್ ಸಮೀರ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಆತನ ಮೊಬೈಲ್ ನಲ್ಲಿ ಪತ್ತೆಯಾಗಿದೆ.

ಆರೋಪಿಯನ್ನು ಕೋರ್ಟ್, ನಾಲ್ಕುದಿನಗಳ ಪೊಲಿಸ್ ಕಸ್ಟಡಿಗೆ ನೀಡಿದೆ. ಹಿಂದೂಪರ ಸಂಘಟನೆಗಳು ಆರೋಪಿ ವಿರುದ್ಧ ಸೂಕ್ತ ತನಿಖೆ ನಡೆಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿವೆ.

Related Articles

Back to top button