Kannada NewsKarnataka NewsLatest
*BREAKING: ಕೊಲ್ಲೂರು ದೇವಸ್ಥಾನದ ಹೆಸರಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚನೆ: ಓರ್ವ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕೊಲ್ಲೂರು ದೇವಸ್ಥಾನದ ಹೆಸರಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚಿಸುತ್ತಿದ್ದ ಓರ್ವ ಆರೋಪಿಯನ್ನು ಕೊಲ್ಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ದೇವಸ್ಥಾನದ ಹೆಸರಲ್ಲಿ ಅಧಿಕೃತ ವೆಬ್ ಸೈಟ್ ನಂತೆ ಕಾಣುವ ನಕಲಿ ವೆಬ್ ಸೈಟ್ ಸೃಷ್ಟಿಸಿ ಆರೋಪಿ ಭಕ್ತರಿಂದ ಹಣ ಪಡೆದು ವಂಚಿಸುತ್ತಿದ್ದ. ಸ್ಕ್ಯಾನರ್ ಮೂಲಕವಾಗಿ ಹಣ ಪಡೆದು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ತಿಜಾರಿ ಜಿಲ್ಲೆಯ ನಾಸಿರ್ ಹುಸೇನ್ ಬಂಧಿತ ಆರೋಪಿ. ಕ್ಷೇತ್ರ ಕಾರ್ಯನಿರ್ವಹಣಾಧಿಕಾರಿ ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.


