ಪಕ್ಷದ ವತಿಯಿಂದ ಮಹಾರಾಷ್ಟ್ರದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಿದ್ದು ಸಾಂಗಲಿ ಜಿಲ್ಲೆಯ ಜತ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಕೃಷ್ಣದೇವ ಗಾಯಕವಾಡ ಅವರ ಪರವಾಗಿ ಹಾಗೂ ಮೀರಜ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಸದಬಾಹು ಖಡೆ ಅವರ ಪರವಾಗಿ ಜಾತ್ಯತೀತ ಜನತಾದಳದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ನವಲಗುಂದ ಮಾಜಿ ಶಾಸಕ ಎನ್.ಹೆಚ್. ಕೋನರಡ್ಡಿ ಅವರು ತೆರಳಿ ಇಂದು ಪ್ರಚಾರವನ್ನು ನಡೆಸಿದರು.
ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಜೆಡಿಎಸ್ ರಾಜ್ಯಾಧ್ಯಕ್ಷ ಶರದ ಪಾಟೀಲ್, ಮುಖಂಡರುಗಳಾದ ಬಸವರಾಜ ಪಾಟೀಲ್ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.