*BREAKING: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 7 ಜನರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಸಿಲಿಂಡರ್ ಸೋರಿಕೆಯಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ರಾಜು, ದುರಗೆಪ್ಪ, ಸುರೇಶ್, ಹುಸೇನಮ್ಮ, ನಾಗರಾಜ್, ವಿಷ್ಣು, ಶ್ರೀಕಾಂತ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. Home add -Advt *ಕಂದಕಕ್ಕೆ ಉರುಳಿದ … Continue reading *BREAKING: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 7 ಜನರಿಗೆ ಗಂಭೀರ ಗಾಯ*