Kannada NewsKarnataka NewsLatest

*8 ಜನ ಭಜರಂಗದಳ ಕಾರ್ಯಕರ್ತರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಹೋಟೆಲ್‌ನಲ್ಲಿ ಸಿಕ್ಕಿಬಿದ್ದ ಅಪ್ರಾಪ್ತ ಹಿಂದೂ ಬಾಲಕಿ ಹಾಗೂ ಮುಸ್ಲಿಂ ಯುವಕನನ್ನು ಪ್ರಶ್ನಿಸಿದ್ದಕ್ಕೆ 8 ಭಜರಂಗದಳ ಕಾರ್ಯಕರ್ತರನ್ನು ಬಂಧಿಸಿರುವ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕೊಪ್ಪಳ ನಗರದ ಖಾಸಗಿ ಹೋಟೆಲ್‌ನಲ್ಲಿ ಅಪ್ರಾಪ್ತ ಹಿಂದೂ ಯುವತಿಯ ಜೊತೆಗೆ ಮುಸ್ಲಿಂ ಯುವಕ ಸಿಕ್ಕಿಬಿದ್ದಿದ್ದ. ಈ ವಿಷಯ ತಿಳಿದು ಸ್ಥಳಕ್ಕೆ ಬಂದ ಭಜರಂಗದಳದ ಕಾರ್ಯಕರ್ತರು ಪ್ರಶ್ನೆ ಮಾಡಿದ್ದರು. ಈ ವೇಳೆ ಸಮೀರ್ ಹಾಗೂ ಭಜರಂಗದಳದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ಸಂಬಂಧ ಸಮೀರ್ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ದೂರಿನನ್ವಯ ಪೊಲೀಸರು 8 ಭಜರಂಗದಳದ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ವಿಷಯ ತಿಳಿದು ಠಾಣೆಗೆ ಆಗಮಿಸಿದ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಅಪ್ರಾಪ್ತ ಹಿಂದೂ ಬಾಲಕಿಯನ್ನು ಪುಸಲಾಯಿಸಿ ಲವ್ ಜಿಹಾದ್‌ಗೆ ಯತ್ನಿಸಿದ ಆರೋಪಿ ಸಮೀರ್‌ನನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button