ಪ್ರಗತಿವಹಿನಿ ಸುದ್ದಿ; ಕೊಪ್ಪಳ: ಚಲಿಸುತ್ತಿದ್ದ ರೈಲಿನಿಂದ ಹಾರಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಕೊಪ್ಪಳ ಕಿಡದಾಳ್ ರೈಲ್ವೆ ಗೇಟ್ ಬಳಿ ನಡೆದಿದೆ.
ಬಳ್ಳಾರಿ ಮೂಲದ ಶೇಜಶ್ರೀ(22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತೇಜಶ್ರೀ ಕಳೆದ ಕೆಲವು ದಿನಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು. ನಿನ್ನೆ ಸಂಜೆ ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ರೈಲಿನಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದ ತೇಜಶ್ರೀಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾಳೆ.
ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪವಿತ್ರಾ ಲೋಕೇಶ್ ಜೊತೆ ಟಾಲಿವುಡ್ ನಟ ನರೇಶ: ಚಪ್ಪಲಿ ಪ್ರಹಾರಕ್ಕೆ ಯತ್ನಿಸಿದ ಪತ್ನಿ ರಮ್ಯಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ