
ಪ್ರಗತಿವಾಹಿನಿ ಸುದ್ದಿ: ಕೊಪ್ಪಳದ ಹೋಂ ಸ್ಟೇ ಮಾಲಕಿ ಹಾಗೂ ವಿದೇಶಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಳಿಕ ಜಿಲ್ಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಹೋಂ ಸ್ಟೇ, ರೆಸಾರ್ಟ್ ಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.
ಕೊಪ್ಪಳದ ಗಂಗಾವತಿ ಸುತಮುತ್ತಲಿನ ಹೋಂ ಸ್ಟೇ, ರೆಸಾರ್ಟ್, ಹೋಟೆಲ್ ಗಳ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ನೇತ್ವದಲ್ಲಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ರಿಜಿಸ್ಟರ್ ಪುಸ್ತಕ, ವಿವಿಧ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಅಕ್ರಮ ಚಟುವಟಿಕೆಗಳನ್ನು ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ