Latest

ಜನವರಿ ಅಂತ್ಯಕ್ಕೆ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ – ತಂಗಡಗಿ

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಬಿಟ್ ಕಾಯಿನ್ ಪ್ರಕರಣದ ಚರ್ಚೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಮಾತುಗಳು ಕೇಳಿಬರುತ್ತಿದ್ದು, ಜನವರಿ ಅಂತ್ಯದ ವೇಳೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರ ಅಂತ್ಯವಾಗಲಿದೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಭವಿಷ್ಯ ನುಡಿದಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಶಿವರಾಜ್ ತಂಗಡಗಿ, ಜನವರಿ ಅಂತ್ಯಕ್ಕೆ ಸಿಎಂ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂಬ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಇದೆ. ಇನ್ನು ಒಂದುವರೆ ವರ್ಷದಲ್ಲಿ ರಾಜ್ಯದಲ್ಲಿ ಇಬ್ಬರು ಸಿಎಂ ಆಗುತ್ತಾರೆ. ಹಾಲಿ ಸಿಎಂ ಬದಲಾವಣೆಯಾಗುವುದು ನೂರಕ್ಕೆ ನೂರರಷ್ಟು ನಿಜ. ಬೊಮ್ಮಾಯಿ ಬಿಟ್ಟು ಇನ್ನೂ ಒಬ್ಬರು ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಸಮರ್ಥವಾಗಿ ಆಡಳಿತ ನಡೆಸುವಲ್ಲಿ ವಿಫಲರಾಗಿದ್ದಾರೆ. ಬಿಟ್ ಕಾಯಿನ್ ಬಗ್ಗೆ ಆರೋಪ ಮಾಡುವ ವಿಪಕ್ಷಗಳೇ ಸಾಕ್ಷ್ಯ ನೀಡಬೇಕು ಎನ್ನುವುದಾದರೆ ಸರ್ಕಾರ ಇರುವುದು ಯಾಕೆ? ಎಂದು ಪ್ರಶ್ನಿಸಿದ್ದಾರೆ.

 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button