Kannada NewsKarnataka NewsLatest

*ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 6 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಟ್ರ್ಯಾಕ್ಟರ್ ಗೆ ಟ್ಯಾಂಕರ್ ವೊಂದು ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ತುಂಗಭದ್ರಾ ಸೇತುವೆ ಮೇಲಿನಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು 6 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಈ ದುರಂತ ಸಂಭವಿಸಿದೆ. ಓರ್ವ ಮಗು ಸೇರಿ ಒಂದೇ ಕುಟುಂಬದ 6 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆ, ಕೊಪ್ಪಳ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button