ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಇನ್ ಸ್ಟಾ ಗ್ರಾಂ ಮೂಲಕ ಬಾಲಕಿಗೆ ಪರಿಚಯನಾದ ಯುವಕನೊಬ್ಬ ಪ್ರೀತಿ-ಪ್ರೇಮದ ಹೆಸರಲ್ಲಿ ಆಕೆಯ ಬೆತ್ತಲೆ ವಿಡಿಯೋ ಮಾಡಿ, ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮುಸ್ತಫಾ ಬಂಧಿತ ಆರೋಪಿ. ಇನ್ ಸ್ಟಾ ಗ್ರಾಂ ಮೂಲಕ ವಿದಾರ್ಥಿನಿಯನ್ನು ಪರಿಚಯಿಸಿಕೊಂಡಿದ್ದ ಮುಸ್ತಫಾ, ಪ್ರೀತಿ-ಪ್ರೇಮದ ನಾಟವಾಡಿದ್ದಾನೆ. ವಿದ್ಯಾರ್ಥಿನಿಯನ್ನು ನಂಬಿಸಿ ವಿಡಿಯೋ ಕಾಲ್ ನಲ್ಲಿ ಬೆತ್ತಲಾಗುವಂತೆ ಹೇಳಿ ಸ್ಕ್ರೀನ್ ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ಬೆದರಿಕೆ ಹಾಕಿ ಪ್ರತಿದಿನ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದ್ದಾನೆ. ವಿದ್ಯಾರ್ಥಿನಿ ನಿರಾಕರಿಸಿದಾಗ ಬ್ಲ್ಯಾಕ್ ಮೇಲ್ ಮಾಡಲು ಶುರು ಮಾಡಿದ್ದನಂತೆ.
ಇದರಿಂದ ನೊಂದ ವಿದ್ಯಾರ್ಥಿನಿ ಗಂಗಾವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ದೂರು ಹಿನ್ನೆಲೆಯಲ್ಲಿ ಗಂಗಾವತಿ ಪೊಲೀಸರು ಆರೋಪಿ ಯುವಕ ಮುಸ್ತಫಾನನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ