Kannada NewsKarnataka News

ನೆರೆ ಸಂತ್ರಸ್ತರಿಗೆ ಅಗತ್ಯ ಪರಿಹಾರ ಕೋರೆ, ಕವಟಗಿಮಠ ಭರವಸೆ

ನೆರೆ ಸಂತ್ರಸ್ತರಿಗೆ ಅಗತ್ಯ ಪರಿಹಾರ ಕೋರೆ, ಕವಟಗಿಮಠ ಭರವಸೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ –

ಚಿಕ್ಕೋಡಿ ಹಾಗೂ ರಾಯಬಾಗ ತಾಲೂಕಿನ ಗ್ರಾಮಗಳಿಗೆ ಕೃಷ್ಣಾ ನದಿಯಿಂದ ಬಂದ ಮಹಾಪ್ರವಾಹದಲ್ಲಿ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡುತ್ತಿರುವ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಇಂದು ಶಿರಗುಪ್ಪಿ, ಇಂಗಳಿ, ಕಾಗವಾಡ ಗ್ರಾಮಗಳಿಗೆ ಭೇಟಿ ನೀಡಿದ್ದರು.

ಪರಿಹಾರ ಕೇಂದ್ರಗಳಲ್ಲಿನ ನಿರಾಶ್ರಿತರಿಗೆ ಸಾಂತ್ವನ ನೀಡಿ ಅಗತ್ಯ ಸಹಾಯವನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Home add -Advt

ಸದ್ಯಕ್ಕೆ ಅವಶ್ಯವಿರುವ ಸಾಮಗ್ರಿಗಳನ್ನು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿ, ನಿರಾಶ್ರಿತ ಕೇಂದ್ರಗಳಲ್ಲಿರುವ ಜನರಿಗೆ ಗುಣಮಟ್ಟದ ಆಹಾರ, ಅಗತ್ಯ ಔಷಧ ಹಾಗೂ ಜಾನುವಾರುಗಳಿಗೆ ಮೇವು ಶೀಘ್ರವೇ ಪೂರೈಸುವಂತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button