Latest

ಬಜೆಟ್ ಅಧಿವೇಶನಕ್ಕೆ ಡೇಟ್ ಫಿಕ್ಸ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಂಸತ್ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಜನವರಿ 31ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ.

ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆಗೆ ಈಗಾಗಲೇ ಸಿದ್ಧತೆ ನಡೆಸಿದ್ದು, ಫೆಬ್ರವರಿ 1ರಂದು ಬಜೆಟ್ ಮಂಡಿಸಲಿದ್ದಾರೆ. ಬಳಿಕ ಅಧಿವೇಶನದಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ.

ಮಾರ್ಚ್ 14ರಿಂದ ಬಜೆಟ್ ಅಧಿವೇಶನದ ಎರಡನೇ ಭಾಗ ಆರಂಭವಾಗಲಿದ್ದು, ಏಪ್ರಿಲ್ 8ರವರೆಗೂ ಬಜೆಟ್ ಅಧಿವೇಶನ ನಡೆಯಲಿದೆ.
ಭೀಕರ ರಸ್ತೆ ಅಪಘಾತ; 7 ಜನರ ದುರ್ಮರಣ

Home add -Advt

Related Articles

Back to top button