*ಪೊಲೀಸ್ ಠಾಣೆಗೆ ಕೋಸುಂಬೆ ದಿಢೀರ್ ಭೇಟಿ, ಪರಿಶೀಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ ಅವರು ಶುಕ್ರವಾರ ಬೆಳಗಾವಿ ನಗರದ ಖಡೆಬಜಾರ್ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ, ಮಕ್ಕಳ ವಿಶೇಷ ಪೊಲೀಸ್ ಘಟಕದ ಕಾರ್ಯ ವೈಖರಿಯನ್ನು ಪರಿಶೀಲನೆ ಮಾಡಿದರು.
ಮಕ್ಕಳ ನ್ಯಾಯ ( ಮಕ್ಕಳ ರಕ್ಷಣೆ ಮತ್ತು ಪೋಷಣೆ) ಕಾಯ್ದೆ-2015, ಕಲಂ 107 ಹಾಗೂ ಮಕ್ಕಳ ನ್ಯಾಯ ( ಮಕ್ಕಳ ರಕ್ಷಣೆ ಮತ್ತು ಪೋಷಣೆ) ಮಾದರಿ ನಿಯಮ -2016 ರ 8(6) ಹಾಗೂ 86(11) ಅನ್ವಯ ಪದನಿಮಿತ್ತ ಅಧಿಕಾರಿಗಳ ಹೆಸರು, ವಿಳಾಸ, ದೂರವಾಣಿ ಸಂಖ್ಯೆಗಳನ್ನು ಒಳಗೊಂಡಂತೆ ಮಾಹಿತಿ ಫಲಕವನ್ನು ಹಾಗೂ ಮಕ್ಕಳ ಸಹಾಯ ವಾಣಿ ಸಂಖ್ಯೆ 1098 ಶಾಶ್ವತ ಫಲಕದಲ್ಲಿ ತ್ವರಿತವಾಗಿ ಅಳವಡಿಸಲು ಸೂಚಿಸಿದರು.
ಮಕ್ಕಳ ಪ್ರಕರಣಗಳ ರಿಜಿಸ್ಟ್ರಾರ್ ಹಾಗೂ ತೆರೆದ ಮನೆ ಕಾರ್ಯಕ್ರಮ ವಹಿಗಳನ್ನು ಪರಿಶೀಲಿಸಿದ ಬಳಿಕ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಸೂಚಸಿದರು .
ಮಕ್ಕಳ ಅಪಹರಣ ಪ್ರಕರಣ, ಪೋಕ್ಸೋ ಪ್ರಕರಣ, ಬಾಲ್ಯ ವಿವಾಹ ಪ್ರಕರಣ ಸೇರಿದಂತೆ ಮಕ್ಕಳ ವಿಷಯಕ್ಕೆ ಸಂಬಂಧಿತ ಪ್ರಕರಣಗಳನ್ನು ಸಕಾಲದಲ್ಲಿ ಸ್ವವಿರದೊಂದಿಗೆ ವರದಿ ಮಾಡಲು, ಪ್ರಕರಣಗಳ ವರದಿಯನ್ನು ನಿಗದಿತ ಕಾಲದಲ್ಲಿ ನಿಯಮಾನುಸಾರ ಕಡ್ಡಾಯವಾಗಿ ವರದಿ
ಮಾಡಿಲೊಳ್ಳುವಂತೆ ನಿರ್ದೇಶನ ನೀಡಿದರು.
ಪೊಲೀಸ್ ಠಾಣೆಗಳ ಲೋಪದೋಷಗಳ ಪಟ್ಟಿಯನ್ನು ತಯಾರಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಸಲ್ಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲು ಸಂಬಂಧಿಸಿದ ಎಸಿಪಿ ಅವರಿಗೆ ಆಯೋಗದ ಅಧ್ಯಕ್ಷರು ತಿಳಿಸಿದರು.
ಈ ವೇಳೆ ಬೆಳಗಾವಿ ನಗರದ ಕ್ರೈಂ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಮತ್ತು ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣ ಅಧಿಕಾರಿಯಾದ ರಘು ಜೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ.ಪರ್ವೀನ್ ಇದ್ದರು.



