Karnataka News

*ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಆರೋಪಿ ಮೇಲೆ ಪೊಲೀಸರ ಫೈರಿಂಗ್*

ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ದರೋಡೆ ಕೋರ ಮುಂಬೈ ಕಣ್ಣನ್ ಮಣಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ ನಡೆಸಿದ್ದ ಹಿನ್ನೆಲೆಯಲ್ಲಿ ಗುಂಡಿನ ದಾಳಿ ನಡೆಸಲಾಗಿದೆ.

ಮಂಗಳೂರಿನ ಉಳ್ಳಾಲ ಬಳಿಯ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಸ್ಥಳಮಹಜರು ನಡೆಸಲು ಕರೆದುಕೊಂಡುಬಂದಿದ್ದ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡೇಟು ಹೊಡೆದು ಹಿಡಿದಿದ್ದಾರೆ.

Related Articles

Back to top button