Kannada NewsKarnataka NewsLatest

*ನಾಳೆ ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ*

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಕುಂದಾನಗರಿ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಬೆಳಿಗ್ಗೆ 10:30ಕ್ಕೆ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಪ್ರಯಾಣಿಸಲಿದ್ದಾರೆ. ಮಧ್ಯಾಹ್ನ 11:45ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

Home add -Advt

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ, ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಹಾಗೂ ಭೋಜನಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೂತನ ಮುಖ್ಯ ಇಂಜಿನಿಯರ್ ಕಟ್ಟಡ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಬೆಳಗಾವಿ ಜಿಲ್ಲಾ ಪ್ರವಾಸದ ಕಾರ್ಯಕ್ರಮ ಪಟ್ಟಿ ಹೀಗಿದೆ.


Related Articles

Back to top button